ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗ ದಲ್ಲಿ ಜುಲೈ ೧೬ , ೧೯೫೯ ರಂದು ಜನಿಸಿದರು. ತಂದೆ ಪ್ರೊ. ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್ನಿಂ ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗ ದಲ್ಲಿ ಜುಲೈ ೧೬ , ೧೯೫೯ ರಂದು ಜನಿಸಿದರು. ತಂದೆ ಪ್ರೊ. ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್ನಿಂದ ಬಿ.ಇ. ಪದವಿ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಿಂದ ಎಂ.ಎಸ್. ಪದವಿ. ಬೆಂಗಳೂರಿನ ಎಚ್.ಎ.ಎಲ್ ಸಂಸ್ಥೆಯಲ್ಲಿ ಉನ್ನತ ತಂತ್ರಜ್ಞ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. [೧] ಕನ್ನಡದಲ್ಲಿ ಚಿಂತನಪೂರ್ಣ ಲೇಖನ, ಪುಸ್ತಕಗಳನ್ನು ಬರೆಯುತ್ತಿದ್ದಾರೆ. ಬರಹದ ಬದುಕು ನೇಮಿಚಂದ್ರ ಅವರು ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ತಮ್ಮ ವೈಶಿಷ್ಟ್ಯಪೂರ್ಣ ಬರಹಗಳನ್ನು ನೀಡುತ್ತಾ ಬಂದಿದ್ದಾರೆ. ‘ನೇಮಿಚಂದ್ರರ ಕಥೆಗಳು’ ಒಂದು ದೊಡ್ಡ ಸಂಕಲನವಾಗಿ ಹೊರಬಂದಿದೆ. ಹಿಂದೆ ಬಿಡಿ ಸಂಕಲನಗಳಾಗಿ ‘ನಮ್ಮ ಕನಸುಗಳಲ್ಲಿ ನೀವಿದ್ದೀರಿ’, ‘ಮತ್ತೆ ಬರೆದ ಕಥೆಗಳು’, ‘ಕಳೆಯ ಬೇಕಿದೆ ನಿನ್ನ ಜೊತೆಯಲಿ ಒಂದು ಶ್ಯಾಮಲ ಸಂಜೆ’ ಇತ್ಯಾದಿ ರೂಪಗಳಲ್ಲಿ ಬಂದ ಈ ಸಂಕಲನದಲ್ಲಿನ ಕಥೆಗಳು ಓದುಗರನ್ನು ಅಪಾರವಾಗಿ ಸೆಳೆದಿವೆ. ನೇಮಿಚಂದ್ರರ ಕಾದಂಬರ...
ಡಿ.ವಿ.ಜಿ ಅವರು ೧೮೮೭ , ಮಾರ್ಚ್ ೧೭ ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು. ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು. ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು "ಸೂರ್ಯೋದಯ ಪ್ರಕಾಶಿಕ" ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್...
ಭಾಷಾ ಕೌಶಲಗಳು ವ್ಯಕ್ತಿಯು ತನ್ನ ಅನುಭವ , ಅನಿಸಿಕೆಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳಲು ಇರುವ ಮಾಧ್ಯಮವೇ ಭಾಷೆ. ಭಾಷೆಯಲ್ಲಿ ನಾಲ್ಕು ರೀತಿಯ ಕೌಶಲಗಳನ್ನು ಗುರುತಿಸಲಾಗಿದೆ. ಅವುಗಳೆಂದರೆ_ 1) ಆಲಿಸುವಿಕೆ 2) ಮಾತುಗಾರಿಕೆ 3) ಓದುವಿಕೆ 4) ಬರವಣಿಗೆ ಈ ಭಾಷಾ ಕೌಶಲಗಳ ಸೂಕ್ತ ಅಭ್ಯಾಸ ಇಲ್ಲವಾದಲ್ಲಿ ಭಾಷೆಯಲ್ಲಿ ಸಾಮಥ್ಯ ಗಳಿಸಲು ಸಾಧ್ಯವಿಲ್ಲ . ಸೂಕ್ತ ತರಬೇತಿ , ಅಭ್ಯಾಸ ಹಾಗೂ ನಿರಂತರ ಪ್ರಯೋಗದಿಂದ ಮಾತ್ರ ಭಾಷಾ ಕೌಶಲಗಳು ಬೆಳೆಯುತ್ತವೆ . ಆಲಿಸುವಿಕೆ : ಧ್ವನಿಗಳನ್ನು ಅರ್ಥಮಾಡಿಕೊಂಡು ಗ್ರಹಿಸುವುದೇ ಆಲಿಸುವಿಕೆಯಾಗಿದೆ . ಕೇಳುವಿಕೆಯೆಲ್ಲ ಗ್ರಹಿಕೆ ಅಲ್ಲ . ಕೇಳಿದ ಶಬ್ಧಗಳನ್ನು ಅರ್ಥಗಳನ್ನಾಗಿ ವ್ಯಾಖ್ಯಾನಿಸಿ ಸ್ವೀಕರಿಸುವ ಒಂದು ಮಾನಸಿಕ ಕ್ರೀಯೆ . ಇಲ್ಲಿ ಏಕಾಗ್ರತೆ ಮುಖ್ಯ . ಧ್ವನಿಯ ಏರಿಳಿತಗಳನ್ನು ಸ್ಪಷ್ಟವಾಗಿ ಗುರುತಿಸಬೇಕು . ಮುಂದಿನ ಎಲ್ಲಾ ಭಾಷಾ ಕೌಶಲಗಳಿಗೆ ಆಧಾರ ಆಲಿಸುವಿಕೆ . ಮಗುವು ಸಹ ತನ್ನ ತಾಯಿಯಿಂದ ಪದಗಲನ್ನು ಆಲಿಸಿ ಕಲಿಯುತ್ತದೆ . ಆಲಿಸುವಿಕೆಯನ್ನು ಉತ್ತಮಪಡಿಸಲು ಕೈಗೊಳ್ಳಬಹುದಾದ ಕ್ರಮಗಳು : 1). ದೈಹಿಕ ಆರೋಗ್ಯವನ್ನು ಉತ್ತಮಪಡಿಸುವುದು. 2) . ಪ್ರಶಾಂತ ವಾತಾವರಣ ಹಾಗೂ ಆತ್ಮೀಯತೆಯ ವ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ