ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗ ದಲ್ಲಿ ಜುಲೈ ೧೬ , ೧೯೫೯ ರಂದು ಜನಿಸಿದರು. ತಂದೆ ಪ್ರೊ. ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್ನಿಂ ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗ ದಲ್ಲಿ ಜುಲೈ ೧೬ , ೧೯೫೯ ರಂದು ಜನಿಸಿದರು. ತಂದೆ ಪ್ರೊ. ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್ನಿಂದ ಬಿ.ಇ. ಪದವಿ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಿಂದ ಎಂ.ಎಸ್. ಪದವಿ. ಬೆಂಗಳೂರಿನ ಎಚ್.ಎ.ಎಲ್ ಸಂಸ್ಥೆಯಲ್ಲಿ ಉನ್ನತ ತಂತ್ರಜ್ಞ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. [೧] ಕನ್ನಡದಲ್ಲಿ ಚಿಂತನಪೂರ್ಣ ಲೇಖನ, ಪುಸ್ತಕಗಳನ್ನು ಬರೆಯುತ್ತಿದ್ದಾರೆ. ಬರಹದ ಬದುಕು ನೇಮಿಚಂದ್ರ ಅವರು ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ತಮ್ಮ ವೈಶಿಷ್ಟ್ಯಪೂರ್ಣ ಬರಹಗಳನ್ನು ನೀಡುತ್ತಾ ಬಂದಿದ್ದಾರೆ. ‘ನೇಮಿಚಂದ್ರರ ಕಥೆಗಳು’ ಒಂದು ದೊಡ್ಡ ಸಂಕಲನವಾಗಿ ಹೊರಬಂದಿದೆ. ಹಿಂದೆ ಬಿಡಿ ಸಂಕಲನಗಳಾಗಿ ‘ನಮ್ಮ ಕನಸುಗಳಲ್ಲಿ ನೀವಿದ್ದೀರಿ’, ‘ಮತ್ತೆ ಬರೆದ ಕಥೆಗಳು’, ‘ಕಳೆಯ ಬೇಕಿದೆ ನಿನ್ನ ಜೊತೆಯಲಿ ಒಂದು ಶ್ಯಾಮಲ ಸಂಜೆ’ ಇತ್ಯಾದಿ ರೂಪಗಳಲ್ಲಿ ಬಂದ ಈ ಸಂಕಲನದಲ್ಲಿನ ಕಥೆಗಳು ಓದುಗರನ್ನು ಅಪಾರವಾಗಿ ಸೆಳೆದಿವೆ. ನೇಮಿಚಂದ್ರರ ಕಾದಂಬರ...
ಡಿ.ವಿ.ಜಿ ಅವರು ೧೮೮೭ , ಮಾರ್ಚ್ ೧೭ ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು. ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು. ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು "ಸೂರ್ಯೋದಯ ಪ್ರಕಾಶಿಕ" ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್...
ಸು.ರಂ.ಎಕ್ಕುಂಡಿ ಸು. ರಂ. ಎಕ್ಕುಂಡಿ ಜನನ ೧೯೨೩ ರಾಣೆಬೆನ್ನೂರು , ಹಾವೇರಿ ಜಿಲ್ಲೆ, ಕರ್ನಾಟಕ ಮರಣ ೧೯೯೫ ಬೆಂಗಳೂರು ವೃತ್ತಿ ಕವಿ ಮತ್ತು ಶಿಕ್ಷಕ ರಾಷ್ಟ್ರೀಯತೆ ಭಾರತ ಪ್ರಕಾರ/ಶೈಲಿ ಕವಿತೆ ಪ್ರಮುಖ ಪ್ರಶಸ್ತಿ(ಗಳು) ಸಾಹಿತ್ಯ ಅಕಾಡೆಮಿ ಪ್ರಶಸ್ತಿ , ನ್ಯಾಶನಲ್ ಅವಾರ್ಡ್ ಫಾರ್ ಟೀಚರ್ಸ್s , ಸೋವಿಯತ್ ಲ್ಯಾಂಡ್ ಅವಾರ್ಡ್. ಪ್ರಭಾವಗಳು [ತೋರಿಸು] ಪ್ರಭಾವಿತರು [ತೋರಿಸು] ಸು.ರಂ. ಎಕ್ಕುಂಡಿ - ಕನ್ನಡ ದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ. ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ . ಇವರು ಹುಟ್ಟಿದ್ದು ೧೯೨೩ ಜನವರಿ ೨೦ ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ . ೧೯೪೪ ರಲ್ಲಿ ಬಿ.ಎ.(ಆನರ್ಸ್) ಪದವಿ ಪಡೆದ ಎಕ್ಕುಂಡಿಯವರು ಉತ್ತರ ಕನ್ನಡ ಜಿಲ್ಲೆಯ ಬಂಕಿಕೊಡ್ಲದಲ್ಲಿ ಪ್ರೌಢಶಾಲೆಯ ಅಧ್ಯಾಪಕರಾದರು. ೩೫ ವರ್ಷಗಳ ಸೇವೆಯ ನಂತರ ಅಲ್ಲಿಯೆ ಮುಖ್ಯಾಧ್ಯಾಪಕರಾದರು. [೧] [೨ ಕೃತಿಗಳು ಕಾವ್ಯ ಶ್ರೀ ಆನಂದತೀರ್ಥರು ಸಂತಾನ ಹಾವಾಡಿಗರ ಹುಡುಗ ಮತ್ಸ್ಯಗಂಧಿ ಬೆಳ್ಳಕ್ಕಿಗಳು ಕಥಾಸಂಕಲನ ನೆರಳು ಕಾದಂಬರಿ ಪ್ರತಿಬಿಂಬಗಳು ಪರಿಚಯ ಶ್ರೀ ಪು.ತಿ.ನರಸಿಂಹಾಚಾರ್ಯರು ಅನುವಾದ ಎರಡು ರಶಿಯನ್ ಕಾದಂಬರಿಗಳು ಪುರಸ್ಕಾರ "ಲೆನಿನ್ನರ ನೆನಪಿಗೆ" ಎನ್ನುವ ಕೃತಿಗೆ ೧೯೭೦ ರಲ್ಲಿ ಸೋವಿಯತ್ ಲ್ಯಾಂಡಿನ ನೆಹರು ಪುರಸ್ಕಾರ ದೊರೆತಿದೆ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ