ಡಿ.ವಿ.ಜಿ. ಒಂದು ಪರಿಚಯ



ಡಿ.ವಿ.ಜಿ ಅವರು ೧೮೮೭582493 447539201962089 1860633282 n.jpg, ಮಾರ್ಚ್ ೧೭
ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.
ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು.



ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು "ಸೂರ್ಯೋದಯ ಪ್ರಕಾಶಿಕ" ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್ರಿಕೆ ನಡೆಯಲಿಲ್ಲ. ಪುನಃ ಮತ್ತೊಂದಕ್ಕೆ ಗುಂಡಪ್ಪನವರ ಹೆಜ್ಜೆ, ಖರ್ಚಿಗಾಗಿ ಏನಾದರೂ ಬರೆಯಬೇಕಿತ್ತು. ಯಾವುದಾದರೂ ಪತ್ರಿಕೆ ಬೇಕಿತ್ತು. ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆದರು. ಕನ್ನಡ ಪತ್ರಿಕೆಗಳಲ್ಲಿ ಅನುಭವ ಪಡೆದರು. "ವೀರಕೇಸರಿ" ಯಲ್ಲಿ ಕಾರ್ಯ ನಿರ್ವಹಿಸಲು ಮದ್ರಾಸ್ ಗೆ ಹೋದಾಗ ಅಲ್ಲಿ "ಹಿಂದೂ" ಪತ್ರಿಕೆಗೆ ಬರೆದರು. ನಂತರ "ಮೈಸೂರು ಟೈಮ್ಸ್" ಇಂಗ್ಲಿಷ್ ಪತ್ರಿಕೆಯ ಸಹಾಯಕ ಸಂಪಾದಕರಾದರು.

ಗುಂಡಪ್ಪನವರ ಸಮಗ್ರ ಸಾಹಿತ್ಯ[೭]

ಸಾಹಿತ್ಯ ಮಾತ್ರವಲ್ಲದೆ ಚರಿತ್ರೆ, ರಾಜನೀತಿ, ತತ್ವಜ್ಞಾನ, ಪ್ರಜಾಪ್ರಭುತ್ವ, ಸಮಾಜ ವಿಜ್ಞಾನ, ಸಾರ್ವಜನಿಕ ಜೀವನ, ಮುಂತಾದ ಹಲವಾರು ವಿಷಯಗಳನ್ನು ಕುರಿತು ಅವರು 66 ಕನ್ನಡ ಕೃತಿಗಳನ್ನು ರಚಿಸಿರುವುದರ ಜೊತೆಗೆ, ಇಂಗ್ಲಿಷ್ – ಕನ್ನಡ ಭಾಷೆಗಳೆರಡರಲ್ಲಿಯೂ ನೂರಾರು ಉಪಯುಕ್ತ ಲೇಖನಗಳನ್ನೂ ಬರೆದಿರುತ್ತಾರೆ. ಇವರ ಇಂಗ್ಲಿಷ್ ಕೃತಿಗಳು ಹಾಗೂ ಲೇಖನಗಳನ್ನು ವಿಶ್ವವಿಖ್ಯಾತ ವಿದ್ವಾಂಸರಾದ ಡಾ. ಎ.ಬಿ. ಕೀತ್ ಹಾಗೂ ಸಿ.ಎಫ್. ಆಂಡ್ರ್ಯೂಸ್ ಮತ್ತು ನಮ್ಮ ದೇಶದ ಅಗ್ರಗಣ್ಯ ವ್ಯಕ್ತಿಗಳಾಗಿದ್ದ ಎಸ್. ಸತ್ಯಮೂರ್ತಿ ಹಾಗೂ ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್ ಅವರುಗಳೂ ಅಂದಿನ ಕಾಲಘಟ್ಟದ ನಮ್ಮ ದೇಶದ ಪ್ರಮುಖ ಪತ್ರಿಕೆಗಳಾಗಿದ್ದ ‘ಸರ್ವೆಂಟ್ ಆಫ್ ಇಂಡಿಯ’ ಹಾಗೂ ‘ಬಾಂಬೆ ಕ್ರಾನಿಕಲ್’ ಪತ್ರಿಕೆಗಳು ಮನಸೋಕ್ತವಾಗಿ ಮೆಚ್ಚಿಕೊಂಡಿವೆ.

ಕನ್ನಡದಲ್ಲಿ

ಕವಿತೆ

  • ನಿವೇದನ
  • ಉಮರನ ಒಸಗೆ
  • ಮಂಕುತಿಮ್ಮನ ಕಗ್ಗ - I
  • ಮರುಳ ಮುನಿಯನ ಕಗ್ಗ - II
  • ಶ್ರೀರಾಮ ಪರೀಕ್ಷಣಂ
  • ಅ೦ತಃಪುರಗೀತೆ
  • ಗೀತ ಶಾಕುಂತಲಾ

ನಿಬಂಧ

  • ಜೀವನ ಸೌಂದರ್ಯ ಮತ್ತು ಸಾಹಿತ್ಯ
  • ಸಾಹಿತ್ಯ ಶಕ್ತಿ
  • ಸಂಸ್ಕೃತಿ
  • ಬಾಳಿಗೊಂದು ನಂಬಿಕೆ

ನಾಟಕ

  • ವಿದ್ಯಾರಣ್ಯ ವಿಜಯ
  • ಜಾಕ್ ಕೇಡ್
  • ಮ್ಯಾಕ್ ಬೆಥ್

ಇಂಗ್ಲಿಷಿನಲ್ಲಿ

  1. Vedanta and Nationalism (1909)
  2. The Problems of Indian Native States (1917)
  3. The Native States in the Empire (1918)
  4. The Indian Native States and the Montagu-Chelmsford Report (1918)
  5. The Government of India and the Indian States, The Indian States Committee : A Note on its Terms of Reference and Their Implications (1928)
  6. All About Mysore (1931)
  7. The States and their People in the Indian Constitution (1931)

ಸಾಧನೆ

ಬಸವನಗುಡಿ ಬ್ಯೂಗಲ್ ರಾಕ್ ಪಾರ್ಕಿನಲ್ಲಿರುವ ಡಿವಿಜಿ ಪ್ರತಿಮೆ.
  1. ೧೯೩೫ ರಲ್ಲಿ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಸ್ಥಾಪಿಸಿದರು.
  2. ಡಿ.ವಿ.ಜಿ. ಅವರು, ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಿಸಿದ ‘ಇಂಗ್ಲಿಷ್–ಕನ್ನಡ ನಿಘಂಟು’ ಕೃತಿಯ ಸಂಪಾದಕ ಸಮಿತಿಯಲ್ಲಿದ್ದರು.
  3. 1939ರಲ್ಲಿ ಮೈಸೂರು ರಾಜ್ಯಾಂಗ ಸುಧಾರಣಾ ಸಮಿತಿ ಸದಸ್ಯರಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶ್ರೀಮತಿ ನೇಮಿಚಂದ್ರ ರ ಪರಿಚಯ

ಭಾಷಾ ಕೌಶಲಗಳು

ಸು.ರಂ. ಎಕ್ಕುಂಡಿ ಕವಿ ಪರಿಚಯ